July 11, 2020

ಪಿ.ವಿ.ಸಿಂಧು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌

ಬಾಸೆಲ್(25ಆ/2019) : ಭಾರತದ ಅಗ್ರಮಾನ್ಯ ಷಟ್ಲರ್ ಪಿ.ವಿ.ಸಿಂಧು ಅವರು ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್​ಷಿಪ್​ ಫೈನಲ್​ನಲ್ಲಿ ಗೆಲುವು ದಾಖಲಿಸುವ ಮೂಲಕ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ. ಈ ಮೂಲಕ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್​ಷಿಪ್​ನಲ್ಲಿ ಚಿನ್ನ ಪದಕ ಗೆದ್ದ ಮೊದಲ ಭಾರತೀಯಳು ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಪಿ.ವಿ.ಸಿಂಧು ಅವರು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಪ್ರಶಸ್ತಿ ಗೆದ್ದ ಭಾರತದ ಮೊದಲ ಆಟಗಾರ್ತಿ ಎಂಬ ದಾಖಲೆಯನ್ನು ಬರೆದಿದ್ದಾರೆ. ಈ ಹಿಂದೆ ಎರಡು ಬಾರಿ ಫೈನಲ್ ಪ್ರವೇಶ ಮಾಡಿದ್ದರು. ಆದರೆ ಪ್ರಶಸ್ತಿಯಿಂದ ವಂಚಿತರಾಗಿದ್ದ ಅವರು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿದ್ದರು.

Leave a Reply

Your email address will not be published. Required fields are marked *

%d bloggers like this: