December 5, 2020

ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ಸ್ಯಾಕ್ಸೋಫೋನ್ ವಾದಕ ಕರಾವಳಿಯ ನೆಚ್ಚಿನ ಕದ್ರಿ ಗೋಪಾಲ್‌ ನಾಥ್ ತೀವ್ರ ಹೃದಯಾಘಾತದಿಂದ ವಿಧಿವಶರಾದರು…
ಕದ್ರಿ ಗೋಪಾಲನಾಥ್ ಕರ್ನಾಟಕ ಸಂಗೀತ ಪದ್ಧತಿಯ ಪ್ರಸಿದ್ಧ ಸ್ಯಾಕ್ಸೊಫೋನ್ ವಾದಕರು. ಸ್ಯಾಕ್ಸೊಫೋನ್ ವಾದನದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದ ಅಳವಡಿಕೆಯಿಂದ ಅವರು ವಿಶ್ವಪ್ರಸಿದ್ಧಿ ಪಡೆದವರಾಗಿದ್ದಾರೆ.
ಗೋಪಾಲನಾಥ್‌ರವರು 1950ರ ವರ್ಷದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ sajipamooda ಜನಿಸಿದರು. ತಂದೆ ತನಿಯಪ್ಪನವರು ನಾಗಸ್ವರ ವಿದ್ವಾಂಸರಾಗಿದ್ದರಿಂದ ಸಂಗೀತವೆಂಬುದು ಗೋಪಾಲನಾಥರ ದಿನಚರಿಯಾಗಿತ್ತು. ತಾಯಿ ಗಂಗಮ್ಮನವರು.

ಕದ್ರಿ ಗೋಪಾಲನಾಥರು ಬಾಲ್ಯದಿಂದಲೇ ತಂದೆಯವರಿಂದ ನಾಗಸ್ವರ ಶಿಕ್ಷಣವನ್ನು ಪಡೆದರು. ಆದರೆ ಅವರ ಬದುಕಿಗೆ ತೆರೆದದ್ದು ಮತ್ತೊಂದು ಬಾಗಿಲು. ಒಮ್ಮೆ ಅವರು ಮೈಸೂರು ಅರಮನೆಯ ಬ್ಯಾಂಡ್ ಸೆಟ್ನೊಂದಿಗೆ ಸ್ಯಾಕ್ಸಫೋನ್ ವಾದನವನ್ನು ಕೇಳಿ ಆ ವಾದ್ಯದಲ್ಲಿರುವ ವೈವಿದ್ಯತೆಗೆ ಮನಸೋತು ಸ್ಯಾಕ್ಸಫೋನಿನಲ್ಲಿಯೇ ಪ್ರಾವೀಣ್ಯತೆ ಸಂಪಾದಿಸಬೇಕೆಂಬ ದೃಢ ನಿರ್ಧಾರ ಕೈಗೊಂಡರು. ಇದಕ್ಕಾಗಿ ಅವರು ನಡೆಸಿದ ನಿರಂತರ ತಪಸ್ಸು ಇಪ್ಪತ್ತು ವರ್ಷಗಳದ್ದು. ಕಲಾನಿಕೇತನದ ಎನ್. ಗೋಪಾಲಕೃಷ್ಣ ಅಯ್ಯರ್ ಅವರಿಂದ ಅವರು ಸ್ಯಾಕ್ಸಫೋನ್ ವಾದ್ಯದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ನುಡಿಸುವುದನ್ನು ಕಲಿತರು. ಅತ್ಯಂತ ಶ್ರದ್ಧೆಯಿಂದ ಸಂಗೀತವನ್ನು ಅಭ್ಯಾಸ ಮಾಡಿದ ಗೋಪಾಲನಾಥರು ಕರ್ನಾಟಕ ಸಂಗೀತ ಮತ್ತು ಸ್ಯಾಕ್ಸೊಫೋನ್ ವಾದ್ಯಗಳೆರಡರಲ್ಲೂ ಪ್ರಭುತ್ವ ಸಾಧಿಸಿದರು.
ಮುಂದೆ ಕದ್ರಿ ಗೋಪಾಲನಾಥರು ಮದ್ರಾಸಿನ ಟಿ. ವಿ. ಗೋಪಾಲಕೃಷ್ಣನ್ ಅವರ ಸಂಪರ್ಕಕ್ಕೆ ಬಂದರು. ಗೋಪಾಲನಾಥರಲ್ಲಿದ್ದ ಅಗಾಧ ಪ್ರತಿಭೆಯನ್ನು ಗಮನಿಸಿದ ಗೋಪಾಲಕೃಷ್ಣನ್ ಅವರು ಕದ್ರಿ ಗೋಪಾಲನಾಥರು ಒಬ್ಬ ಅಂತರರಾಷ್ಟ್ರೀಯ ಪ್ರತಿಭೆಯಾಗಿ ರೂಪುಗೊಳ್ಳಲು ನೀರೆರೆದರು. ಗೋಪಾಲನಾಥರು ತಮ್ಮ ಗುರುಗಳ ಅನುಗ್ರಹವೇ ತಮ್ಮ ಎಲ್ಲಾ ಸಾಧನೆಗಳ ಹಿಂದಿರುವ ಶಕ್ತಿ ಎಂದು ಭಕ್ತಿಯಿಂದ ಸ್ಮರಿಸುತ್ತಾರೆ.
ಗೋಪಾಲನಾಥರ ಪ್ರಥಮ ಕಾರ್ಯಕ್ರಮ ಮದ್ರಾಸಿನ ಚೆಂಬೈ ಮೆಮೋರಿಯಲ್ ಟ್ರಸ್ಟ್ನಲ್ಲಿ ನಡೆಯಿತು. ಅದು ಅವರಿಗೆ ಎಲ್ಲೆಡೆಯಿಂದ ಪ್ರಸಿದ್ಧಿ ತಂದಿತು. ಆಕಾಶವಾಣಿ ‘ಎ’ ಟಾಪ್ ಶ್ರೇಣಿಯ ಕಲಾವಿದರೆಂದು ಪರಿಗಣಿತರಾದ ಗೋಪಾಲನಾಥರ ಕಚೇರಿಗಳು ಕರ್ನಾಟಕ, ಆಂಧ್ರ, ತಮಿಳುನಾಡು, ಕೇರಳ ರಾಜ್ಯಗಳಲ್ಲಿಯೇ ಅಲ್ಲದೆ ಉತ್ತರ ಭಾರತದ ಪ್ರತಿಷ್ಟಿತ ಉತ್ಸವ- ವೇದಿಕೆಗಳಲ್ಲಿ, ಬಿಬಿಸಿಯ ಆಹ್ವಾನದ ಮೇರೆಗೆ ರಾಯಲ್ ಆಲ್ಬರ್ಟ್ ಹಾಲ್‌ನಲ್ಲಿ, ಫ್ರಾಗ್ ಜಾಸ್ ಫೆಸ್ಟಿವಲ್, ಬರ್ಲಿನ್ ಸಂಗೀತೋತ್ಸವ, ಮೆಕ್ಸಿಕೋದ ಸೆರ್ವಾಂಟಿನೊ ಉತ್ಸವ, ಲಂಡನ್‌ನ ಪ್ರೊಮೆನಾಡೊ, ಪ್ಯಾರಿಸ್‌ನ ಹೈಲ್ ಫೆಸ್ಟಿವಲ್ ಮುಂತಾದ ವಿಶ್ವ ಉತ್ಸವ-ವೇದಿಕೆಗಳಲ್ಲಿ ಕದ್ರಿಯವರ ಸ್ಯಾಕ್ಸೋಫೋನ್ ಮೊಳಗಿದೆ. ಯೂರೋಪ್, ಸ್ವಿಜರ್‌ಲ್ಯಾಂಡ್, ಯುನೈಟೆಡ್ ಕಿಂಗ್ಡಂ, ಅಮೆರಿಕ, ಕೆನಡಾ, ಆಸ್ಟ್ರೇಲಿಯಾ, ಜರ್ಮನಿ, ಸಿಂಗಪೂರ್, ಬಹರೇನ್, ಕ್ವೆಟಾರ್, ಮಸ್ಕಟ್, ಮಲೇಷಿಯಾ, ಶ್ರೀಲಂಕಾ ಹೀಗೆ ಅವರು ವಿಶ್ವದಾದ್ಯಂತ ಯಶಸ್ವಿ ಕಚೇರಿಗಳನ್ನು ನಿರಂತರವಾಗಿ ನಡೆಸಿಕೊಡುತ್ತಾಬಂದಿದ್ದಾರೆ.
ಕದ್ರಿ ಗೋಪಾಲನಾಥರಿಗೆ ಸಲ್ಲದ ಪ್ರಶಸ್ತಿಗಳೇ ಇಲ್ಲ. ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ತಮಿಳುನಾಡು ಸರಕಾರದ ಕಲೈಮಾಮಣಿ, ಕರ್ನಾಟಕ ಕಲಾಶ್ರೀ, ಗಾನಕಲಾ ಭೂಷಣ, ನಾದ ಗಂಧರ್ವ, ನಾದೋಪಾಸನ ಬ್ರಹ್ಮ ಸುನಾದ, ನಾದಕಲಾ ರತ್ನ, ನಾದಕಲಾನಿಧಿ, ಸಂಗೀತ ವಿದ್ಯಾರತ್ನ, ಸಂಗೀತ ರತ್ನ, ಶೃಂಗೇರಿ – ಮಂತ್ರಾಲಯ – ಅಹೋಬಿಲ ಮುಂತಾದ ಪೀಠಗಳಿಂದ ಸನ್ಮಾನ, ಕಂಚಿ ಕಾಮಕೋಠಿ ಆಸ್ಥಾನ ವಿದ್ವಾನ್, ಬೆಂಗಳೂರು ವಿಶ್ವವಿದ್ಯಾಲಯದ ಡಾಕ್ಟರೇಟ್ ಮುಂತಾದ ಅನೇಕ ಪ್ರಶಸ್ತಿ ಗೌರವಗಳು ಕದ್ರಿ ಗೋಪಾಲನಾಥರನ್ನು ಅರಸಿಬಂದಿವೆ.

1 thought on “ಕದ್ರಿ ಗೋಪಾಲನಾಥ್ ನಿಧನ

Leave a Reply

Your email address will not be published. Required fields are marked *

Related Post

%d bloggers like this: