January 23, 2021

ಕ್ರೈಮ್

ಹಾಡುಹಗಲಲ್ಲೇ ದಂಪತಿಗಳ ಬರ್ಬರ ಹತ್ಯೆ,ಆರೋಪಿ ಬಂಧನ

ಮಂಗಳೂರು(29ಎ/2020): ಮಂಗಳೂರಿನ ಹೊರವಲಯದ ಕಿನ್ನಿಗೋಳಿ ಏಳಿಂಜೆಯಲ್ಲಿ ಹಾಡುಹಗಲಲ್ಲೇ ದಂಪತಿಗಳ ಬರ್ಬರ ಹತ್ಯೆ ಘಟನೆ ಜರುಗಿದೆ.

ವಿನ್ಸೆಂಟ್ ಡಿಸೋಜ(48) ಪತ್ನಿ ಹೆಲಿನ್ ಡಿಸೋಜ(43) ಹತ್ಯೆಗೊಳಗಾದವರು.
ಪಿಕ್ಕಾಸು ಹಾಗೂ ಹಾರೆಯಿಂದ ಹಲ್ಲೆ ನಡೆಸಿ ಕೊಲೆಯನ್ನು ನೆರೆ ಮನೆಯ ಅಲ್ಪನ್ಸ್ ಸಲ್ಡಾನ ಕೊಲೆ(51) ಮಾಡಿರುವುದಾಗಿ ವರದಿಯಾಗದೆ.
ಮನೆ ಮುಂಭಾಗದಲ್ಲೇ ಬರ್ಬರವಾಗಿ ಕೊಲೆ ಮಾಡಲಾಗಿದ್ದು,ಮನೆ ಪಕ್ಕದ ಜಾಗದ ತಕರಾರಿನ ಹಿನ್ನಲೆಯಲ್ಲಿ‌ ಕೊಲೆ ಮಾಡಲಾಗಿದೆ,
ಸ್ಥಳಕ್ಕೆ ಮುಲ್ಕಿ ಪೊಲೀಸರ ಭೇಟಿ,ಆರೋಪಿ ಪೊಲೀಸ್ ವಶಕ್ಕೆ ಪಡೆದಿದ್ದಾರೆ.

ಸಚಿನ್ ಸಾವಂತ್ ಜಾಮೀನು,ಬಿಡುಗಡೆ

ಬೆಳಗಾವಿ(28/ಎ2020) ಸಿಆರ್‌ಪಿಎಫ್ ಯೋಧ ಸಚಿನ್ ಸಾವಂತ್ ಬಂಧನ ಪ್ರಕರಣಕ್ಕೆ ನ್ಯಾಯಾಲಯ ಜಾಮೀನು ನೀಡಿದೆ.
ಸಚಿನ್ ಸಾವಂತ್ ಅವರಿಗೆ ಜಾಮೀನು ಸಿಕ್ಕಿರುವ ಹಿನ್ನೆಲೆ ನ್ಯಾಯಾಲಯದ ಆದೇಶ ಪ್ರತಿ ಜೊತೆಗೆ ಸಿಆರ್‌ಪಿಎಫ್ ಅಧಿಕಾರಿಗಳು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಬಂದಿದ್ದರು. ಜೈಲು ಅಧಿಕಾರಿಗಳು ನ್ಯಾಯಾಲಯ ಆದೇಶ ಪ್ರತಿ ಪರಿಶೀಲನೆ ನಡೆಸಿ ಸಚಿನ್ ಸಾವಂತ್ ಅವರನ್ನು ಬಿಡುಗಡೆ ಮಾಡಿದ್ದಾರೆ.
ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಮಾಸ್ಕ್ ಧರಿಸುವಂತೆ ಹೇಳಿದ್ದಕ್ಕೆ ಕರ್ತವ್ಯ ನಿರತ ಪೊಲೀಸರು ಮತ್ತು ಸಿಆರ್‌ಪಿಎಫ್ ಯೋಧನ ನಡುವೆ ಮಾತುಕತೆ ಮುಂದುವರಿದು ಪರಸ್ಪರ ಹಲ್ಲೆ ಮಾಡಿದ್ದರು,
ನಂತರ ಪೋಲಿಸರು ಬೇಡಿ ತೋಡಿಸಿ ಠಾಣೆಯಲ್ಲಿ ಕೂರಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಏಪ್ರಿಲ್ 23ರಂದು ಈ ಘಟನೆ ನಡೆದಿದ್ದು, ಸದಲಗಾ ಪೊಲೀಸ್ ಠಾಣೆಯಲ್ಲಿ ಪೊಲೀಸರ ಕ್ರಮಕ್ಕೆ ಸಿಆರ್‌ಪಿಎಫ್ ಕೋಬ್ರಾ ಬಟಾಲಿಯನ್ ಅಸಿಸ್ಟೆಂಟ್ ಕಮಾಂಡಂಟ್ ಶ್ಯಾಮ್ ಸುಂದರ್ ಅವರು ಕೂಡ ಕರ್ನಾಟಕ ಡಿಜಿಪಿಗೆ ಟ್ವೀಟ್ ಅಸಮಾಧಾನ ವ್ಯಕ್ತಪಡಿಸಿದ್ದರು. ಘಟನೆ ನಂತರ ಎಫ್‍ಐಆರ್ ದಾಖಲಿಸುವ ಮುನ್ನ ನಮ್ಮ ಗಮನಕ್ಕೂ ತರಬೇಕಿತ್ತು. ಆದರೆ ಪೊಲೀಸರು ಯೋಧ ಎಂದು ತಿಳಿದ ಮೇಲೂ ಠಾಣೆಯಲ್ಲಿ ಕೈಗೆ ಬೇಡಿ ಹಾಕಿ ಕೂರಿಸಿದ್ದು ಸರಿಯಲ್ಲ ಎಂದು ಖಾರವಾಗಿ ಬರೆದಿದ್ದರು.

ಕರೋನಾ ಪೀಡಿತ “ಮಂಗಳೂರು ಎಕ್ಸ್‌ಪ್ರೆಸ್” ರೈಲಿನಲ್ಲಿ ಪ್ರಯಾಣ

ಬೆಂಗಳೂರು(26ಮಾರ್ಚ್/2020): ಕೊರೊನಾ ಪೀಡಿತ ವ್ಯಕ್ತಿಯೊಬ್ಬರು ರೈಲಿನಲ್ಲಿ ಸಂಚರಿಸಿದ್ದು, ಈಗ ಸರ್ಕಾರ ಈ ರೈಲಿನ ಬೋಗಿಯಲ್ಲಿದ್ದ ಪ್ರಯಾಣಿಕರು ಕೂಡಲೇ ಪರೀಕ್ಷೆಗೆ ಹಾಜರಾಗಬೇಕೆಂದು ಸೂಚಿಸಿದೆ.ಉತ್ತರ ಕನ್ನಡ ಜಿಲ್ಲೆಯ 65 ವರ್ಷದ ವ್ಯಕ್ತಿಯೊಬ್ಬರು ದುಬೈಗೆ ಪ್ರಯಾಣ ಬೆಳೆಸಿ ಮಾರ್ಚ್ 17ಕ್ಕೆ ಮುಂಬೈ ಮೂಲಕ ಭಾರತಕ್ಕೆ ಬಂದಿದ್ದಾರೆ. ಅಂದು ಅವರು ಮಂಗಳೂರು ಎಕ್ಸ್‌ಪ್ರೆಸ್ ರೈಲಿನ ಎಸ್3 ಕೋಚ್ ಲೋಯರ್ ಬರ್ತ್ ನಲ್ಲಿ ಮುಂಬೈನಿಂದ ಭಟ್ಕಳಕ್ಕೆ ಮಾರ್ಚ್ 18 ರಂದು ಮರಳಿದ್ದಾರೆ.
ಕೊರೊನಾ ಈಗ ಮೂರನೇ ವ್ಯಕ್ತಿಗಳಿಗೂ ಹರಡುತ್ತಿರುವ ಹಿನ್ನೆಲೆಯಲ್ಲಿ ಈ ಬೋಗಿಯಲ್ಲಿನ ಪ್ರಯಾಣಿಸಿದ ಎಲ್ಲ ಪ್ರಯಾಣಿಕರು ದಯವಿಟ್ಟು ಈ ಕೂಡಲೇ ಶುಲ್ಕ ರಹಿತ 104, 080-4684600 ಅಥವಾ 080 66692000 ನಂಬರಿಗೆ ಕರೆ ಮಾಡಬೇಕು ಎಂದು ಸರ್ಕಾರ ಕೇಳಿಕೊಂಡಿದೆ.

ಕಪ್ಪು ಕಲ್ಲು ಗಣಿಗಾರಿಕೆ ಇಬ್ಬರ ಬಂಧನ

ಬೆಳ್ತಂಗಡಿ(ಮಾ21/2020) : ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನಾವೂರು ಗ್ರಾಮದ ಓಡಿಕಾರು ಎಂಬಲ್ಲಿ ಮಾ.19ರಂದು ಅಕ್ರಮವಾಗಿ ನಡೆಯುತ್ತಿದ್ದ ಕಪ್ಪುಕಲ್ಲು ಗಣಿಗಾರಿಕೆ ಮಾಡುತ್ತಿದ್ದ ಪ್ರದೇಶಕ್ಕೆ ಬೆಳ್ತಂಗಡಿ ತಾಲ್ಲೂಕು ತಹಶಿಲ್ದಾರವರು ದಾಳಿ ನಡೆಸಿ ಸ್ಥಳದಲ್ಲಿದ್ದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದು, ಶನಿವಾರ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 
ಬಂಧಿತ ಆರೋಪಿಗಳನ್ನು ಬೆಳ್ತಂಗಡಿ ತಾಲೂಕು ಲಾಯಿಲಾ ನಿವಾಸಿ ಪ್ರತೀಕ್ ಸಾಲ್ಯಾನ್ ಹಾಗೂ ಬೆಳ್ತಂಗಡಿ ತಾಲೂಕು ಸುಲ್ಕೆರೆ ನಿವಾಸಿ ಅಣ್ಣಪ್ಪ ಎಂದು ಗುರುತಿಸಲಾಗಿದೆ.ದಾಳಿ ನಡೆಸಿದ ಸಂದರ್ಭ ಸ್ಥಳದಲ್ಲಿದ್ದ ಕೆಲಸಗಾರರು ಓಡಿ ಹೋಗಿದ್ದು, ಸ್ಥಳದಲ್ಲಿದ್ದ ಜಿಲೆಟಿನ್ ಕಡ್ಡಿಗಳು, 11 ವೈರ್ ಜೀವಂತ ಮದ್ದುಗಳು, ಚೀಲದಲ್ಲಿ 15 ಜಿಲೆಟಿನ್ ಕಡ್ಡಿಗಳು, ಕೆಲಸಕ್ಕೆ ಬಳಸಿದ ಟ್ರಾಕ್ಟರ್, ಎರಡು ಹಿಟಾಚಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು.ವಶ ಪಡಿಸಿಕೊಂಡ ಸೊತ್ತುಗಳ ಮೌಲ್ಯ ಸುಮಾರು 25 ಲಕ್ಷ ರೂ. ಅಂದಾಜಿಸಲಾಗಿದ್ದು, ಈ ಕುರಿತು ಬೆಳ್ತಂಗಡಿ ಠಾಣೆಗೆ ದೂರು ನೀಡಲಾಗಿದೆ.

ನಿರ್ಭಯಾ ಆರೋಪಿಗಳಿಗೆ ಗಲ್ಲು ಕುಣಿಕೆ

ನವದೆಹಲಿ(20ಮಾ/2020): ನಿರ್ಭಯಾ ಹಂತಕರಿಗೆ ಶುಕ್ರವಾರ (ಮಾರ್ಚ್ 20) ಮುಂಜಾನೆ 5.30ಕ್ಕೆ ಮರಣದಂಡನೆ ಜಾರಿ ಮಾಡಲಾಯಿತು. ಕಪ್ಪುಬಟ್ಟೆ ಧರಿಸಿದ್ದ ಕೈದಿಗಳನ್ನು ವಾರ್ಡನ್ ಮತ್ತು ಹೆಡ್‌ವಾರ್ಡನ್ ಗಲ್ಲು ಕೋಣೆಗೆ ಕರೆತಂದಿದ್ದರು. ಮ್ಯಾಜಿಸ್ಟ್ರೇಟ್ ಸಹಿ ಹಾಕಿದ್ದ ಡೆತ್ ವಾರಂಟ್‌ ಓದಿದ ನಂತರ ನೇಣುಗಂಬಕ್ಕೆ ಏರಿಸಲಾಯಿತು.
ಗಲ್ಲು ಶಿಕ್ಷೆ ಜಾರಿಗೆ ಕೆಲವೇ ಗಂಟೆಗಳು ಬಾಕಿಯಿರುವಂತೆ ನಿರ್ಭಯಾ ಪ್ರಕರಣದ ಅಪರಾಧಿಗಳು ದೆಹಲಿ ಹೈಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಅಪರಾಧಿಗಳ ಅರ್ಜಿ ಹೈಕೋರ್ಟ್‌ನಲ್ಲಿ ವಜಾ ಆದ ನಂತರ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು. ಮಧ್ಯರಾತ್ರಿ ನ್ಯಾಯಮೂರ್ತಿ ಭಾನುಮತಿ ನೇತೃತ್ವದ ನ್ಯಾಯಪೀಠ ವಿಚಾರಣೆ ನಡೆಸಿ, ಅಪರಾಧಿಗಳ ಅರ್ಜಿ ತಳ್ಳಿ ಹಾಕಿ, ಗಲ್ಲು ಶಿಕ್ಷೆ ಕಾಯಂಗೊಳಿಸಿತ್ತು.

ಮಂಗಳೂರು: ಸಿಎಎ ಹಿಂಸಾಚಾರ 21 ಜನರ ಜಾಮೀನು ರದ್ದು

ಮಂಗಳೂರು(6ಮಾ/2020): ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ನಡೆದ ಪ್ರತಿಭಟನೆ ಗಲಭೆಗೆ ತಿರುಗಿ ಹಿಂಸಾಚಾರ ನಡೆದು ಗೋಲಿಬಾರ್ ನಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಈ ಹಿಂಸಾಚಾರಕ್ಕೆ ಕಾರಣವಾಗಿದ್ದಾರೆ ಎನ್ನಲಾದ 21 ಆರೋಪಿಗಳನ್ನು ಬಂಧಿಸಿದ್ದ ಪೊಲೀಸರ ಕ್ರಮ ಸರಿಯಲ್ಲ ಎಂದು ಅಭಿಪ್ರಾಯ ಪಟ್ಟಿದ್ದ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಹೈಕೋರ್ಟ್ ನೀಡಿದ್ದ ಜಾಮೀನನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
21 ಆರೋಪಿಗಳು ಗಲಭೆಯಲ್ಲಿ ಭಾಗಿಯಾಗಿರುವುದಕ್ಕೆ ಪುರಾವೆ ಇದೆ ಎಂದು ರಾಜ್ಯದ ಪರ ವಾದ ಮಂಡಿಸುವ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದರು. ಹೀಗೆ ವಾದ ಮಂಡಿಸುತ್ತಿದ್ದಂತೆ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ, ನ್ಯಾ.ಗವಾಯಿ, ನ್ಯಾ.ಸೂರ್ಯಕಾಂತ್ ಅವರು ಹೈ ಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಿ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಿದರು.
ರಾಜ್ಯ ಹೈಕೋರ್ಟ್ 21 ಆರೋಪಿಗಳಿಗೆ ಇತ್ತೀಚೆಗಷ್ಟೇ ಜಾಮೀನು ಮಂಜೂರು ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಹೀಗಾಗಿ ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಪಡಿಸಿದೆ.

“ಪಾಕಿಸ್ತಾನಕ್ಕೆ ಜೈ” ಕುಂದಾಪುರದಲ್ಲಿ ಬಂಧನ

ಉಡುಪಿ(2ಮಾ2020): ಮಾನಸಿಕ ಅಸ್ವಸ್ಥತನೊಬ್ಬ ಪಾಕಿಸ್ತಾನಕ್ಕೆ ಜಯಕಾರ ಮಾಡಿದ ಘಟನೆ ಕುಂದಾಪುರದಲ್ಲಿ ಜರಗಿತು.

ಸೋಮವಾರ ಬೆಳಿಗ್ಗೆ ಸುಮಾರು 9.45ರ ಸುಮಾರಿಗೆ ಆರೋಪಿ ರಾಘವೇಂದ್ರ ಗಾಣಿಗ ಕುಂದಾಪುರ ಕುಂದಾಪುರದ ಸರ್ಕಾರೀ ಕಚೇರಿಗಳ ಸಂಕೀರ್ಣ ಮಿನಿ ವಿಧಾನಸೌಧಕ್ಕೆ ಬಂದಿದ್ದಾನೆ. ಮೆಟ್ಟಿಲುಗಳನ್ನು ಹತ್ತುತ್ತಿದ್ದಂತೆಯೇ ಪಾಕಿಸ್ತಾನ ಜಿಂದಾಬಾದ್ ಪಾಕಿಸ್ತಾನ ಜಿಂದಾಬಾದ್ ಎನ್ನುವ ಘೋಷಣೆಗಳನ್ನು ಕಾರಿಡಾರ್ ಉದ್ದಕ್ಕೂ ಕೂಗುತ್ತಾ ಸಾಗಿದ್ದಾನೆ. ಇದನ್ನು ಗಮನಿಸಿದ ಸಾರ್ವಜನಿಕರು ಅದನ್ನು ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ಕುಂದಾಪುರ ಪೊಲೀಸರಿಗೆ ಸುದ್ಧಿ ಮುಟ್ಟಿಸಿದ್ದಾರೆ. ಬಳಿಕ ಆರೋಪಿ ರಾಘವೇಂದ್ರ ಗಾಣಿಗ ಕಾರಿಡಾರ್‌ನಿಂದ ಮಿನಿ ವಿಧಾನಸವಧದ ಒಳಗೆ ಪ್ರವೇಶಿಸಿದ್ದು, ಅಲ್ಲಿಯೂ ನಿರಂತರವಾಗಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆಗಳನ್ನು ಕೂಗಿದ್ದಾನೆ. ಈ ಸಂದರ್ಭ ಮಾಹಿತಿ ಪಡೆದ ಕುಂದಾಪುರ ತಹಸೀಲ್ದಾರ್ ಲಿಖಿತವಾಗಿ ಆರೋಪಿಯ ವಿರುದ್ದ ದೂರು ನೀಡಿದ್ದು, ಪೊಲೀಸರು ಆರೋಪಿ ರಾಘವೇಂದ್ರ ಗಾಣಿಗನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.

ಆರೋಪಿ ರಾಘವೇಂದ್ರ ಗಾಣಿಗ ಮಾನಸಿಕ ಅಸ್ವಸ್ಥ ಎಂಬ ಮಾಹಿತಿ ಬಂದಿದೆ‌. ಆರೋಪಿ ರಾಘವೇಂದ್ರ ಗಾಣಿಗ ವಿವಾಹಿತನಾಗಿದ್ದು, ಒಂದು ಪುಟ್ಟ ಮಗುವಿದೆ. ವಿದ್ಯಾವಂತನಾಗಿರುವ ರಾಘವೇಂದ್ರ ಎಂಟು ವರ್ಷಗಳ ಹಿಂದೆ ಕುಂದಾಪುರದ ಖಾಸಗೀ ಶಾಲೆಯಲ್ಲಿ ಹಿಂದಿ ಶಿಕ್ಷಕನಾಗಿದ್ದ ಎನ್ನುವ ಮಾಹಿತಿ ತಿಳಿದು ಬಂದಿದೆ. ಸಧ್ಯ ಪತ್ನಿ ಹಾಗೂ ಮಗುವನ್ನು ತ್ಯಜಿಸಿ ತಾಯಿಯೊಂದಿಗೆ ವಾಸ ಮಾಡುತ್ತಿದ್ದಾನೆ ಎನ್ನುವ ಮಾಹಿತಿಗಳನ್ನು ಪೊಲೀಸರು ಹೊರಹಾಕಿದ್ದಾರೆ. ಆರೋಪಿ ರಾಘವೇಂದ್ರನಿಗೆ ಮಾನಸಿಕ ಕಾಯಿಲೆಯಿದ್ದು, ಇಂದು ಕುಂದಾಪುರದ ಮಾತಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ಆತನ ತಾಯಿ ಕರೆದುಕೊಂಡು ಬಂದಿದ್ದರು ಎನ್ನಲಾಗಿದೆ. ಇದೇ ಸಂದರ್ಭ ಅಲ್ಲಿಂದ ತಪ್ಪಿಸಿಕೊಂಡು ಮಿನಿ ವಿಧಾನಸೌಧಕ್ಕೆ ಬಂದಿದ್ದು ಈಗ ಪೊಲೀಸರ ಅತಿಥಿಯಾಗಿದ್ದಾನೆ.

ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು MDMA ಹೊಂದಿದ ಆರೋಪಿಗಳ ಸೆರೆ

ಮಂಗಳೂರು(10ಪೆ/2020): ಮಂಗಳೂರು ನಗರದ ಸಾರ್ವಜನಿಕರಿಗೆ ಮಾದಕ ವಸ್ತುವಾದ (Methylene dioxy methamphetamine) MDMA ಮುಂಬೈಯಿಂದ ಖರೀದಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಇಕಾನಾಮಿಕ್ & ನಾರ್ಕೋಟಿಕ್ ಠಾಣೆಯ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿರುತ್ತಾರೆ
ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತುವಾದ (Methylene dioxy methamphetamine) MDMA ವನ್ನು ಮುಂಬೈಯಿಂದ ಅಕ್ರಮವಾಗಿ ಖರೀದಿಸಿ ಮಂಗಳೂರಿಗೆ ಐಷಾರಾಮಿ ಕಾರೊಂದರಲ್ಲಿ ತರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು- ಉಡುಪಿ ರಾಷ್ಟ್ರೀಯ ಹೆದ್ದಾರಿಯ ಮುಲ್ಕಿ ಬಳಿ ಕಾರನ್ನು ತಪಾಸಣೆ ಮಾಡಿದಾಗ (Methylene dioxy methamphetamine) MDMA ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ.
ಮೊಹಮ್ಮದ್ ಶರೀಫ್ ಸಿದ್ದಿಕ್, ಪ್ರಾಯ(40), ತಂದೆ: ಪಿ ಮೊಹಮ್ಮದ್, ವಾಸ: ಸೈಟ್ ನಂಬ್ರ: 151/2, ಚೊಕ್ಕಬೆಟ್ಟು, ಸುರತ್ಕಲ್, ಮಂಗಳೂರು.
ಮೊಹಮ್ಮದ್ ಶಾಫಿ @ ಚಪ್ಪಿ, ಪ್ರಾಯ(33), ತಂದೆ: ದಿ: ಅಬ್ದುಲ್ ಖಾದರ್, ವಾಸ: ಡೋರ್ ನಂಬ್ರ: ಜಿಎಲ್-2/478, 2 ನೇ ಬ್ಲಾಕ್, ಕಾಟಿಪಳ್ಳ, ಸುರತ್ಕಲ್, ಮಂಗಳೂರು.
ಮೊಹಮ್ಮದ್ ಅನಾಸ್,, ಪ್ರಾಯ(27), ತಂದೆ: ಅಹಮ್ಮದ್, ವಾಸ: 3-48, 2 ನೇ ಬ್ಲಾಕ್, ಕಾಟಿಪಳ್ಳ, ಜುಮ್ಮಾ ಮಸೀದಿ ಬಳಿ, ಕೈಕಂಬ ಅಂಚೆ, ಮಂಗಳೂರು ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರಿಂದ ರೂ. 87,560/- ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು, 3 ಮೊಬೈಲ್ ಫೋನ್ ಗಳು, ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಐಷಾರಾಮಿ ಬಿಎಂಡಬ್ಲೂ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ನಿಷೇದಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್ ಗಳು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಬಿಎಂಡಬ್ಲೂ ಕಾರಿನ ಒಟ್ಟು ಮೌಲ್ಯ 51,12,560/- ಲಕ್ಷ ಆಗಬಹುದು. ಆರೋಪಿಗಳು ಮುಂಬೈಯಿಂದ ಅಕ್ರಮವಾಗಿ ಮಾದಕ ವಸ್ತುಗಳನ್ನು ಖರೀದಿಸಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಿ ಹಣ ಗಳಿಸಲು ಮಂಗಳೂರು ಕಡೆಗೆ ಬರುತ್ತಿದ್ದರು.
ಆರೋಪಿಗಳ ಪೈಕಿ ಮೊಹಮ್ಮದ್ ಶರೀಫ್ ಸಿದ್ದಿಕ್ ಎಂಬಾತನ ವಿರುದ್ಧ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತುವನ್ನು ಹೊಂದಿದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಆರೋಪಿ ಮೊಹಮ್ಮದ್ ಶಾಫಿ ಚಪ್ಪಿ ಎಂಬಾತನ ವಿರುದ್ದ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಹೊಂದಿದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಆರೋಪಿ ಮೊಹಮ್ಮದ್ ಅನಾಸ್ ಎಂಬಾತನ ವಿರುದ್ಧ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣವೊಂದು ದಾಖಲಾಗಿರುತ್ತದೆ.
ಮಾನ್ಯ ಪೊಲೀಸ್ ಆಯುಕ್ತರಾದ ಡಾ: ಹರ್ಷ ಐ.ಪಿ.ಎಸ್, ಮಾನ್ಯ ಪೊಲೀಸ್ ಉಪ ಆಯುಕ್ತರವರಾದ ಶ್ರೀ ಲಕ್ಷ್ಮಿ ಗಣೇಶ್, (ಅಪರಾಧ & ಸಂಚಾರ), ರವರ ಮಾರ್ಗದರ್ಶನದಲ್ಲಿ ಮಂಗಳೂರು ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಆರ್ ನಾಯ್ಕ್, ಪಿಎಸ್ಐಯವರಾದ ಕಬ್ಬಾಳ್ ರಾಜ್ ಮತ್ತು ಸಿಬ್ಬಂದಿಗಳು ಹಾಗೂ ಎಕಾನಾಮಿಕ್ ಮತ್ತು ನಾರ್ಕೋಟಿಕ್ ಪೊಲೀಸ್ ಠಾಣೆಯ ಪಿಎಸ್ಐ ಲತಾ ಮತ್ತು ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

“ಬಾಂಬ್ ಇಟ್ಟವ ತುಳು ಮಾತನಾಡುತ್ತಿದ್ದ” ಆಟೋ ಚಾಲಕ ಹೇಳಿಕೆ

ಮಂಗಳೂರು(20ಜನವರಿ/2020): ಮಂಗಳೂರು ಬಾಂಬ್ ಪತ್ತೆ ಪ್ರಕರಣ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿಯೊಂದು ಹೊರಬಂದಿದೆ. ಶಂಕಿತ ಆರೋಪಿಯನ್ನು ವಿಮಾನ ನಿಲ್ದಾಣದಕ್ಕೆ ಬಾಡಿಗೆ ಬಂದ ಆಟೋ ಚಾಲಕ ಸ್ವತಃ ತಾನೇ ಪೊಲೀಸರ ಎದುರು ಹಾಜರಾಗಿದ್ದಾನೆ.
ಆಟೋದಲ್ಲಿ ಬಂದ ಅಪರಿಚಿತನೋರ್ವ ಟಿಕೆಟ್ ಕೌಂಟರ್ ಬಳಿ ಕಪ್ಪು ಬಣ್ಣದ ಬ್ಯಾಗ್ ಇರಿಸಿ ನಾಪತ್ತೆ ಆಗಿದ್ದ. ಮಂಗಳೂರು ವಿಮಾನ ನಿಲ್ದಾಣದ ಸಿಸಿಟಿವಿ ದೃಶ್ಯಗಳ ಫೋಟೋಗಳು ಲಭ್ಯವಾಗಿದ್ದು, ಕ್ಯಾಪ್ ಹಾಕಿರುವ ಒಬ್ಬ ಕೈಯಲ್ಲಿ ಬ್ಯಾಗ್ ಹಿಡಿದಿದ್ದಾನೆ. ಈ ವ್ಯಕ್ತಿ ನಿಲ್ದಾಣದಿಂದ ಹೊರಹೋಗುವುದನ್ನು ಫೋಟೋಗಳು ಸಿಕ್ಕಿದ್ದವು. ಹಾಗೆಯೇ ಶಂಕಿತ ಬಂದಿದ್ದ ಎನ್ನಲಾದ ಆಟೋದ ಎರಡು ಫೋಟೋಗಳು ಸಹ ಲಭಿಸಿತ್ತು.
ಈ ಫೋಟೋಗಳಲ್ಲಿ ಆರೋಪಿ ವಿಮಾನ ನಿಲ್ದಾಣದಕ್ಕೆ ಆಟೋದಲ್ಲಿ ಬಂದ ಫೋಟೋ ಕೂಡ ಲಭಿಸಿತ್ತು. ಸುದ್ದಿ ತಿಳಿದ ಆಟೋದ ಚಾಲಕ ಪೊಲೀಸ್ ಠಾಣೆಗೆ ಬಂದು ಸ್ವತಃ ಹಾಜರಾಗಿದ್ದು, ಶಂಕಿತ ಆರೋಪಿಯ ಬಗ್ಗೆ ಮಾಹಿತಿ ನೀಡಿದ್ದಾನೆ. ನನ್ನ ಆಟೋದಲ್ಲಿ ಬಂದ ಶಂಕಿತ ಆರೋಪಿ ತುಳುನಲ್ಲಿ ಮಾತನಾಡುತ್ತಿದ್ದ. ಜೊತೆಗೆ ನನಗೆ 400 ರೂ. ಬಾಡಿಗೆ ಕೊಟ್ಟು ಪಂಪ್‍ವೆಲ್ ಬಳಿ ಇಳಿದುಕೊಂಡು ಹೋದ ಎಂದು ಹೇಳಿದ್ದಾನೆ. ಆಟೋ ಚಾಲಕನ ಮಾಹಿತಿ ಮೇರೆಗೆ ಮೂರು ವಿಶೇಷ ತಂಡಗಳನ್ನು ರಚಿಸಿರುವ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ

ಮಂಗಳೂರು: ದೊಂಬಿ ಬಗ್ಗೆ ಪೋಲಿಸರಿಗೆ ಜೀವ ಬೆದರಿಕೆ ಕರೆ,ದೂರು ದಾಖಲು

ಮಂಗಳೂರು(24ಡಿ/2019): ಡಿ.19ರಂದು ನಡೆದ ಅಹಿತಕರ ಘಟನೆಗಳ ಬಳಿಕ ಈಗ ಕೆಲವು ಪೊಲೀಸ್‌ ಅಧಿಕಾರಿಗಳಿಗೆ ಮತ್ತು ಅವರ ಕುಟುಂಬದವರಿಗೆ ಅನಾಮಧೇಯ ವ್ಯಕ್ತಿಗಳಿಂದ ಬೆದರಿಕೆ ಕರೆಗಳು ಬರುತ್ತಿದ್ದು, ಈ ಬಗ್ಗೆ ನಗರದ ಸೈಬರ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಇದರೊಂದಿಗೆ ಡಿ.19ರಂದು ನಗರದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಪಟ್ಟ ಯಾವುದೇ ಫೂಟೋ, ವಿಡಿಯೋಗಳಿದ್ದಲ್ಲಿ ಸಾರ್ವಜನಿಕರು ವಾಟ್ಸ್‌ಆ್ಯಪ್‌ ನಂಬರ್‌ 9480802327ಗೆ ಕಳುಹಿಸಿ ಕೊಡಿ ಅಥವಾ [email protected] ಇ-ಮೇಲ್‌ ಮಾಡಬಹುದು ಎಂದು ಮಂಗಳೂರು ಪೊಲೀಸ್‌ ಕಮಿಷನರ್‌ ಡಾ| ಹರ್ಷ ಟ್ವೀಟ್‌ ಮಾಡಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಪ್ರತಿಭಟನೆಗೆ ಅನುಮತಿ ನಿರಾಕರಣೆ ಹಿನ್ನೆಲೆಯಲ್ಲಿ 19ರಂದು ನಗರದ ಸ್ಟೇಟ್‌ ಬ್ಯಾಂಕ್‌ ಮತ್ತು ಬಂದರ್‌ ಪರಿಸರದ ನೆಲ್ಲಿಕಾಯಿ ರಸ್ತೆ, ಅಜೀಜುದ್ದೀನ್‌ ರಸ್ತೆ, ಮಿಷನ್‌ ರಸ್ತೆ ಮತ್ತಿತರ ಕಡೆ ಪ್ರತಿಭಟನಾಕಾರರು ಗುಂಪು ಸೇರಿದ್ದರಿಂದ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈ ಸಂಘರ್ಷದಲ್ಲಿ ಗೋಲಿಬಾರ್‌ಗೆ ಇಬ್ಬರು ಸಾವನ್ನಪ್ಪಿದ್ದರು. ಘಟನೆ ಬಳಿಕ ಪೊಲೀಸ್‌ ಕಾರ್ಯಾಚರಣೆ ವಿರುದ್ಧ ಆಕ್ರೋಶಿತರಾದ ಕೆಲವರು ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಕೊಲೆ ಬೆದರಿಕೆ ಹಾಕಲು ಆರಂಭಿಸಿದ್ದಾರೆ. ಇದರಿಂದಾಗಿ ಕೆಲವು ಪೊಲೀಸ್‌ ಅಧಿಕಾರಿಗಳಿಗೂ ಗನ್‌ಮ್ಯಾನ್‌ ಭದ್ರತೆ ಒದಗಿಸಲಾಗಿದೆ.
ಕದ್ರಿ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಶಾಂತಾರಾಮ ಮತ್ತು ಕುಟುಂಬದವರಿಗೆ ಹೆಚ್ಚಿನ ಬೆದರಿಕೆ ಕರೆಗಳು ಬರುತ್ತಿವೆ. ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶಾಂತಾರಾಮ ಮತ್ತವರ ಕುಟುಂಬದವರಿಗೆ ಜೀವ ಬೆದರಿಕೆಯನ್ನು ಹಾಕುತ್ತಿರುವ ಹಿನ್ನೆಲೆಯಲ್ಲಿ ಸೈಬರ್‌ ಕ್ರೈಮ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Related Post